Thursday, June 25, 2026
Homeಕರಾವಳಿಮಂಗಳೂರುಮಂಗಳೂರು ವಿಮಾನ ನಿಲ್ದಾಣವನ್ನು ಧ್ವಂಸ ಮಾಡ್ತೇನೆ ಎಂದು ಬೆದರಿಕೆ ಕರೆ ಮಾಡಿದಾತ ಅಂದರ್

ಮಂಗಳೂರು ವಿಮಾನ ನಿಲ್ದಾಣವನ್ನು ಧ್ವಂಸ ಮಾಡ್ತೇನೆ ಎಂದು ಬೆದರಿಕೆ ಕರೆ ಮಾಡಿದಾತ ಅಂದರ್

- Advertisement -
- Advertisement -

ಮಂಗಳೂರು ದಿನಾಂಕ 29-08-2025 ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುತ್ತಾನೆ. ಈ ಬಗ್ಗೆ ಡ್ಯೂಟಿ ಟರ್ಮಿನಲ್ ಮ್ಯಾನೇಜರ್, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ರವರು ಬಜಪೆ ಪೊಲೀಸ್ ಠಾಣೆಗೆ ನೀಡಿದ್ದರು. ಅದರಂತೆ  ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಬಂಧಿತ ಆರೋಪಿ. ಈತನನ್ನು ತಮಿಳುನಾಡು ರಾಜ್ಯ ವೆಲ್ಲೂರ್ ನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ  ದೇಶದ ಎಲ್ಲಾ ವಿಮಾನ ನಿಲ್ದಾನಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತನದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾನೆ.

- Advertisement -

Latest News

error: Content is protected !!