Monday, August 17, 2026
Homeಕರಾವಳಿಮಂಗಳೂರುವಿಟ್ಲ: ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ: ವಿಟ್ಲದಲ್ಲಿ ಪೋಕ್ಸೋ  ಕಾಯ್ದೆಯಡಿ ಆರೋಪಿ ಬಂಧನ

ವಿಟ್ಲ: ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ: ವಿಟ್ಲದಲ್ಲಿ ಪೋಕ್ಸೋ  ಕಾಯ್ದೆಯಡಿ ಆರೋಪಿ ಬಂಧನ

- Advertisement -
- Advertisement -

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕೋಡಿ ನಿವಾಸಿ ಉಮೇಶ್ ಶೆಟ್ಟಿ (47) ಎಂಬಾತನನ್ನು ವಿಟ್ಲ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ಪುತ್ತೂರು ಸರ್ಕಾರಿ ಆಸ್ಪತ್ರೆಯ ಮಾಜಿ ಡಿ ಗ್ರೂಪ್ ಸಿಬ್ಬಂದಿಯಾಗಿರುವ ಈತ, ಬಾಲಕನನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ದೂರು ದಾಖಲಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಅಪ್ರಾಪ್ತರ ಮೇಲಿನ ದೌರ್ಜನ್ಯ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಅಥವಾ 1098 ಚೈಲ್ಡ್ ಹೆಲ್ಪ್‌ಲೈನ್‌ಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

- Advertisement -

Latest News

error: Content is protected !!