Tuesday, July 28, 2026
Homeಕರಾವಳಿಉಡುಪಿಕಾರ್ಕಳ : 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಾರ್ಕಳ : 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಕಾರ್ಕಳ: ಬರೋಬ್ಬರಿ 36 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯೊಬ್ಬನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾರ್ಕಳ ರಾಮಸಮುದ್ರ ನಿವಾಸಿ ಪೀಟರ್ ಆಗಸ್ಟಿನ್ ಮಾರ್ಟೀಸ್ (60) ಬಂಧಿತ ಆರೋಪಿ. ಈತನ ವಿರುದ್ಧ 1989ರಲ್ಲಿ ಗಲಭೆ, ಅಕ್ರಮ ಪ್ರವೇಶ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗಂಭೀರ ಪ್ರಕರಣ ದಾಖಲಾಗಿತ್ತು. ಅಂದಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಜಾರಿಯಲ್ಲಿದ್ದ ವಾರಂಟ್ ಆಧಾರದ ಮೇಲೆ, ಪೊಲೀಸರು ಜುಲೈ 27ರಂದು ರಾಮಸಮುದ್ರ ಬಳಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗೆ ಕಾರ್ಕಳದ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!