Saturday, June 6, 2026
Homeಕರಾವಳಿಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ; ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ; ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿ   ಧರ್ಮಸ್ಥಳ ಪೊಲೀಸರು ಜೈಲಿಗಟ್ಟಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ 178/18 u/s 323,325 IPC ಗಲಾಟೆ ಪ್ರಕರಣ ನಡೆದ‌ ನಂತರ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡ ಬಳಿಕ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳ ಕಾಲ ಊರು ಬಿಟ್ಟು ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪುತ್ತೂರು ತಾಲೂಕಿನ ಕಲ್ಲಗುಡ್ಡೆ, ನೂಜಿಬಾಳ್ತಿಲ ಗ್ರಾಮದ ಮಂಜೋಲಿ ನಿವಾಸಿ ವರ್ಗೀಸ್ @ ರಾಜನ್ ಎಂಬವರ ಮಗನಾದ ಪ್ರಬೀನ @ ಪ್ರವೀಣ(34) ಎಂಬಾತ ಊರಿಗೆ ಬಂದಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಜನವರಿ 11ರಂದು ಮಧ್ಯಾಹ್ನ 1 ಗಂಟೆಗೆ ಪುತ್ತೂರು ತಾಲೂಕು ನೂಜಿಬಾಲ್ತಿಲ ಬಸ್ಸು ತಂಗುದಾಣದ ಬಳಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿಹಾಗೂ ಧರ್ಮಸ್ಥಳ ಠಾಣಾ ಪೊಲೀಸ್ ಉಪ-ನಿರೀಕ್ಷಕರಾದ ಅನಿಲ್ ಕುಮಾರ್.ಡಿ ಮಾರ್ಗದರ್ಶನದಂತೆ  ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ರಾಜೇಶ್.ಎನ್ ಮತ್ತು ಗೋವಿಂದ ರಾಜ್ ರವರು ಆರೋಪಿಯನ್ನು ಬಂಧಿಸಿ ಮಾನ್ಯ ಬೆಳ್ತಂಗಡಿ JMFC ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!