Wednesday, July 15, 2026
Homeಕರಾವಳಿಮಂಗಳೂರುಮಂಗಳೂರು : ಲೋಕಾಯುಕ್ತ ಅಧಿಕಾರಿ ಎಂದು ವಂಚಿಸಿದವನು ಅಂದರ್

ಮಂಗಳೂರು : ಲೋಕಾಯುಕ್ತ ಅಧಿಕಾರಿ ಎಂದು ವಂಚಿಸಿದವನು ಅಂದರ್

- Advertisement -
- Advertisement -

ಮಂಗಳೂರು : ಲೋಕಾಯುಕ್ತ ಅಧಿಕಾರಿ ಎಂದು ವಂಚಿಸಿದವನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ.

ಪುರಸಭೆಯ ಕಂದಾಯ ಅಧಿಕಾರಿಯ ಬಳಿ ತಾನು ಲೋಕಾಯುಕ್ತ ಅಧಿಕಾರಿ ಎಂದು ಹಣಕ್ಕೆ ಬೇಡಿಕೆ ಇಟ್ಟ ಆರೋಪಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ನಲ್ಲಗುಟ್ಲದಲ್ಲಿ ಗ್ರಾಮದ ಧನಂಜಯ್ ರೆಡ್ಡಿ ತೋಟ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಏಪ್ರಿಲ್ ನಲ್ಲಿ ಸೋಮೇಶ್ವರ ಪುರಸಭೆ ರೆವಿನ್ಯೂ ಆಫೀಸರ್ ಪುರುಷೋತ್ತಮ ಅವರ ಮೊಬೈಲ್‌ಗೆ ಅಪರಿಚಿತನಿಂದ ವಾಟ್ಸಾಪ್ಕ ಕರೆ ಬಂದಿತ್ತು. ತಾನು ಲೋಕಾಯುಕ್ತದಿಂದ ಮಾತನಾಡುತ್ತಿದ್ದೇನೆ. ತಮ್ಮ ಮೇಲೆ ಆರೋಪ ಬಂದಿದೆ. ನಮ್ಮ ಟೆಕ್ನಿಕಲ್ ಆಫೀಸರ್ ನಿಮ್ಮ ಆಫೀಸಿಗೆ ಬರುವ ಮೊದಲು ಅದನ್ನು ಸರಿ ಮಾಡುವುದಾದರೆ ಮಾಡುವ ಎಂದು, ಹಣ ನೀಡುವಂತೆ ಫೋನ್‌ನಲ್ಲಿ ಬೇಡಿಕೆ ಇಟ್ಟಿದ್ದನು.

ಈ ಕುರಿತು ಆರೋಪಿ ಕರೆ ಮಾಡಿರುವ ಮೊಬೈಲ್ ಸಂಖ್ಯೆಯನ್ನು ಟ್ರೂ ಕಾಲರ್‌ನಲ್ಲಿ ಪರೀಶೀಲಿಸಿದಾಗ ಡಿ. ಪ್ರಭಾಕರ ಲೋಕಾಯುಕ್ತ ಪಿಐ ಎಂದು ಬಂದಿದೆ. ಈ ಬಗ್ಗೆ ಪುರುಷೋತ್ತಮ ಅವರು ಮಂಗಳೂರಿನಲ್ಲಿರುವ ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಈ ಬಗ್ಗೆ ವಿಚಾರಿಸಿದ್ದರು. ಆಗ ಅಂತಹ ಹೆಸರಿನ ಯಾವುದೇ ಅಧಿಕಾರಿ/ಸಿಬ್ಬಂದಿ ಇರುವುದಿಲ್ಲವಾಗಿ ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!