Sunday, June 28, 2026
Homeತಾಜಾ ಸುದ್ದಿಸೋಶಿಯಲ್ ಮೀಡಿಯಾದಲ್ಲಿ ಲೈಂಗಿಕತೆಗೆ ಉತ್ತೇಜನ ನೀಡುತ್ತಿದ್ದ ವಿಕೃತ ಕಾಮಿಯ ಬಂಧನ

ಸೋಶಿಯಲ್ ಮೀಡಿಯಾದಲ್ಲಿ ಲೈಂಗಿಕತೆಗೆ ಉತ್ತೇಜನ ನೀಡುತ್ತಿದ್ದ ವಿಕೃತ ಕಾಮಿಯ ಬಂಧನ

- Advertisement -
- Advertisement -

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಲೈಂಗಿಕತೆಗೆ ಉತ್ತೇಜನ ನೀಡುತ್ತಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪುರುಷೋತ್ತಮ(40) ಎಂದು ಗುರುತಿಸಲಾಗಿದೆ. ಈತ ಮೂಲತಃ ಮಡಿವಾಳದವನಾಗಿದ್ದು ಜುಮೊಟೋ ಡೆಲವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈತನನ್ನು ಆಗ್ನೇಯ ವಿಭಾಗ ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಆರೋಪಿ ಫೇಸ್ ಬುಕ್ ಅಕೌಂಟ್ ನಿಂದ ಸುಂದರವಾಗಿರುವ . ಭಾರತಿಯ ಹಾಗೂ ವಿದೇಶಿ ಯುವತಿಯರಿಗೆ ಪ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿದ್ದ. ಬಳಿಕ ಮೆಸೆಂಜರ್ ಮುಖಾಂತರ ಯುವತಿಯರಿಗೆ ಲೈಂಗಿಕ ಉತ್ತೇಜನ ನೀಡುವ ಅಪ್ರಾಪ್ತ ಯುವತಿಯರ ಫೋಟೋಸ್ ಹಾಗೂ ವೀಡಿಯೋಗಳನ್ನು ಕಳುಹಿಸಿಕೊಡುತ್ತಿದ್ದ ಎನ್ನಲಾಗಿದೆ. ಈ ವಿಕೃತ ಕಾಮುಕನ ಬಗ್ಗೆ ಕೆಲ ಯುವತಿಯರು ದೂರು ದಾಖಲಿಸಿದ್ದು, ಘಟನೆ ಸಂಬಂಧ ಆಗ್ನೇಯ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!