Sunday, June 7, 2026
Homeಕರಾವಳಿಬಂಟ್ವಾಳ; ಬೆಂಗಳೂರಿಂದ ಬರುತ್ತಿದ್ದಾಗ ಖಾಸಗಿ ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಪ್ರಕರಣ;ಆರೋಪಿಯನ್ನು ಬಂಧಿಸಿದ ಪೊಲೀಸರು

ಬಂಟ್ವಾಳ; ಬೆಂಗಳೂರಿಂದ ಬರುತ್ತಿದ್ದಾಗ ಖಾಸಗಿ ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಪ್ರಕರಣ;ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ; ಬೆಂಗಳೂರಿಂದ ಬರುತ್ತಿದ್ದಾಗ ಖಾಸಗಿ ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬೆಳ್ತಂಗಡಿ ಮೂಲದ ಮಹಮ್ಮದ್  ಅಝೀಮ್ ಬಂಧಿತ ಆರೋಪಿ.

ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನಾಗಿದ್ದ ಆರೋಪಿ ಅಝೀಮ್  ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದ. ಮೂಲತಃ ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ವ್ಯಾಸಂಗ ಮಾಡುತ್ತಿದ್ದು ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ ಯಾವುದೇ ಸ್ಪಂದನೆ ದೊರೆಯದಿದ್ದಾಗ, ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿಸಿದ್ದ. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದ.ಪ್ರಕರಣವನ್ನು ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಲಭ್ಯ ಮಾಹಿತಿಗಳನ್ನಾಧರಿಸಿ ಆರೋಪಿ ಮಹಮ್ಮದ್ ಅಝೀಮ್ ನನ್ನು  ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!