Sunday, June 7, 2026
Homeಕರಾವಳಿಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ ಬೆಳ್ತಂಗಡಿ ಪೊಲೀಸರು

ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ ಬೆಳ್ತಂಗಡಿ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಸಂಬಂಧಿ ಯುವತಿಯನ್ನು  ಶಿಕ್ಷಕ ಪ್ರೀತಿ ಮಾಡುತ್ತಿದ್ದ ಕಾರಣಕ್ಕೆ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದ ಕೋಟಿಕಟ್ಟೆಯಲ್ಲಿ 2019 ರಲ್ಲಿ ನಡೆದಿದ್ದ ಶಿಕ್ಷಕ ವಿಕ್ರಮ್ ಜೈನ್ ಕೊಲೆ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದ 302, 201, 212, ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಪ್ರಕರಣದ A3 ಆರೋಪಿ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಊರ್ಲ ನಿವಾಸಿ ರವಿ ಪೂಜಾರಿಯ ಮಗನಾದ ಗಣೇಶ್ ಪೂಜಾರಿ (36)  ಎಂಬಾತನನ್ನು ಮಾ. 21 ರಂದು ಆತನ ಹೆಂಡತಿ ಮನೆ ಪುಂಜಾಲಕಟ್ಟೆಯಿಂದ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಮಂಗಳೂರು 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ  ನ್ಯಾಯಧೀಶರ ಮುಂದೆ ಹಾಜರುಪಡಿಸಿದ್ದು.ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತ್ಯನಾರಾಯಣ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.  

- Advertisement -

Latest News

error: Content is protected !!