Friday, October 4, 2024
Homeಚಿಕ್ಕಮಗಳೂರುಚಿಕ್ಕಮಗಳೂರಿನಲ್ಲಿ 5 ವರ್ಷದ ಬಾಲಕಿಯ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಮನೆಯಲ್ಲೇ ಇದ್ದ ನರ ರಾಕ್ಷಸ

ಚಿಕ್ಕಮಗಳೂರಿನಲ್ಲಿ 5 ವರ್ಷದ ಬಾಲಕಿಯ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಮನೆಯಲ್ಲೇ ಇದ್ದ ನರ ರಾಕ್ಷಸ

spot_img
- Advertisement -
- Advertisement -

ಚಿಕ್ಕಮಗಳೂರಿನಲ್ಲಿ 5 ವರ್ಷದ ಬಾಲಕಿಯ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯನ್ನು ಹತ್ಯೆಗೈದ ನರ ರಾಕ್ಷಸ ಮನೆಯಲ್ಲೇ ಸಿಕ್ಕಿ ಬಿದ್ದಿದ್ದಾನೆ.ಹೌದು.. ಪುಟ್ಟ ಬಾಲಕಿಯನ್ನು ಆಕೆಯ ತಂದೆಯೇ ಹತ್ಯೆ ಮಾಡಿರೋದು ತನಿಖೆಯಿಂದ ಗೊತ್ತಾಗಿದೆ.

5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿತ್ತು.

ತನಿಖೆ ನಡೆಸಿದ ಪೊಲೀಸರಿಗೆ ಇದೀಗ ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಗಂಡ-ಹೆಂಡತಿಯ ನಡುವಿನ ಅನೈತಿಕ ಸಂಬಂಧದ ಜಗಳದಿಂದ ಬಾಲಕಿಯ ತಂದೆಯೇ ಹತ್ಯೆ ಮಾಡಿರುವುದಾಗಿ ಗೊತ್ತಾಗಿದೆ.

ಜ್ವರ ಹಿನ್ನೆಲೆಯಲ್ಲಿ ಅಂಗನವಾಡಿಗೆ ಹೋಗದೆ ಮನೆಯಲ್ಲಿ ಬಾಲಕಿ ಇದ್ದಳು. ತಾಯಿ ಜಮೀನು ಕೆಲಸ ಮುಗಿಸಿ ಮನೆಗೆ ಬಂದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -
spot_img

Latest News

error: Content is protected !!