Wednesday, June 3, 2026
Homeಕರಾವಳಿಪುತ್ತೂರು: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ: ಯುವಕನನ್ನು ಬಂಧಿಸಿದ ಪೊಲೀಸರು

ಪುತ್ತೂರು: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ: ಯುವಕನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರು: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ ಆರೋಪದಡಿ ಯುವಕನೊಬ್ಬನನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ್ದಾರೆ.

ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ ಸಾರ್ವಜನಿಕರನ್ನು ಉದ್ದೇಶಿಸಿ ಹೀನಾಯವಾಗಿ ಮಾತನಾಡುತ್ತಾ ತೊಂದರೆ ನೀಡುತ್ತಿರುವುದಾಗಿ  ಮಾಹಿತಿ ಬಂದಿತ್ತು.

ರೌಂಡ್ಸ್ ಕರ್ತವ್ಯದಲ್ಲಿದ್ದ ಎಸ್.ಐ  ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ  ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ಮಾದಕ ವಸ್ತು ಸೇವಿಸಿದ ಕುರಿತು ಸಂಶಯದ ಮೇರೆಗೆ ಆತನನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ  ಆತ ಗಾಂಜಾ ಸೇವಿಸಿರುವ ಕುರಿತು ವೈದ್ಯಾಧಿಕಾರಿಗಳು ದೃಢಪತ್ರ ನೀಡಿದ್ದರು.  ಹಾಗಾಗಿ ಆರೋಪಿಯ  ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!