Thursday, June 4, 2026
Homeಕರಾವಳಿಪುತ್ತೂರು; 8 ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು; 8 ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು; 8 ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಮಾಡನ್ನೂರು ಗ್ರಾಮದ ಕೊಂಬಲಿ ನಿವಾಸಿ ಸುಲೈಮಾನ್ ಬಂಧಿತ ಆರೋಪಿ.

ಈತನ ವಿರುದ್ಧ 2021 ರಲ್ಲಿ ದರ್ಬೆಯಲ್ಲಿ ಹೊಟೇಲ್ ವೊಂದಕ್ಕೆ ಅಕ್ರಮವಾಗಿ ನುಗ್ಗಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಕೋರ್ಟ್ ಗೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆ ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ಅದರಂತೆ ಪುತ್ತೂರು ಪೊಲೀಸರು ಆರೋಪಿಯನ್ನು ಸವಣೂರು ಅಪ್ರಾಝ ಫೇರಾ ಡೈಸ್ ಫ್ಲಾಟ್ ನಿಂದ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!