Wednesday, June 3, 2026
Homeಕರಾವಳಿಉಡುಪಿಕಾರ್ಕಳ; ಸಿದ್ದರಾಮಯ್ಯ ಅವರನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಪೋಸ್ಟ್ ಹಾಕಿದಾತ ಅಂದರ್

ಕಾರ್ಕಳ; ಸಿದ್ದರಾಮಯ್ಯ ಅವರನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಪೋಸ್ಟ್ ಹಾಕಿದಾತ ಅಂದರ್

- Advertisement -
- Advertisement -

ಕಾರ್ಕಳ; ಸಿದ್ದರಾಮಯ್ಯ ಅವರನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಪೋಸ್ಟ್ ಹಾಕಿದಾತನನ್ನು ಪೊಲೀಸರು ಬಂಧಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್​ ಬಂಧಿತ.

ಸಂಪತ್  ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್​ನನ್ನು ಬಂಧಿಸಿದ್ದಾರೆ.

ಮೇ 2ರಂದು ಈತ ತನ್ನ ಇನ್ನಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಈ ಕುರಿತು ಕಾರ್ಕಳದ ಸೂರಜ್ ಶೆಟ್ಟಿ ನಕ್ರೆ ಎಂಬವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ರಾಜಕೀಯ ಪಕ್ಷದ ಮುಖಂಡರು ಹಾಗೂ ಹಿಂದಬಗಳಿಗೆ ನೆಮ್ಮದಿ ಎಂದು ಪ್ರಚೋದಿಸಿ ವೈರತ್ವವನ್ನು ಬೆಳೆಸಿ ದ್ವೇಷ ಭಾವನೆ ಹರಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುತ್ತಾನೆ ಎಂದು ಸೂರಜ್ ದೂರಿನಲ್ಲಿ ತಿಳಿಸಿದ್ದರು. ಬೆಂಗಳೂರಿನಲ್ಲಿ ಹೋಂ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದ ಸಂಪತ್‌ನನ್ನು ಮೇ 4ರಂದು ಕಾರ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿರುತ್ತಾರೆ.

- Advertisement -

Latest News

error: Content is protected !!