Wednesday, June 3, 2026
Homeಕರಾವಳಿಮಂಗಳೂರುಮಂಗಳೂರು : ನಿಷೇಧಿತ ಪಿಎಫ್ಐ ಸಂಘಟನೆಯ ಬಗ್ಗೆ ಪೋಸ್ಟ್ ಹಾಕಿ ಪ್ರಚಾರ :ಆರೋಪಿಯನ್ನು ಬಂಧಿಸಿ ಎನ್.ಐ.ಎ...

ಮಂಗಳೂರು : ನಿಷೇಧಿತ ಪಿಎಫ್ಐ ಸಂಘಟನೆಯ ಬಗ್ಗೆ ಪೋಸ್ಟ್ ಹಾಕಿ ಪ್ರಚಾರ :ಆರೋಪಿಯನ್ನು ಬಂಧಿಸಿ ಎನ್.ಐ.ಎ ಕೋರ್ಟ್ ಗೆ ಹಾಜರುಪಡಿಸಿ ಜೈಲಿಗಟ್ಟಿದ ಮಂಗಳೂರು ಪೊಲೀಸರು

- Advertisement -
- Advertisement -

ಮಂಗಳೂರು : ನಿಷೇಧಿತ ಪಿಎಫ್ಐ ಸಂಘಟನೆಯ ಬಗ್ಗೆ ಪೋಸ್ಟ್ ಹಾಕಿ ಪ್ರಚಾರ ಮಾಡಿದ ಪ್ರಕರಣಕ್ಕೆ ಸಂಭಂಪಟ್ಟಂತೆ ಆರೋಪಿಯನ್ನು ಬಂಧಿಸಿ ಎನ್.ಐ.ಎ ಕೋರ್ಟ್ ಗೆ ಹಾಜರುಪಡಿಸಿ ಮಂಗಳೂರು ಪೊಲೀಸರು ಜೈಲಿಗಟ್ಟಿದ್ದಾರೆ. ಉಪ್ಪಿನಂಗಡಿಯ ರಾಮಕುಂಜ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್(55) ಬಂಧಿತ ಆರೋಪಿ.ದಿನಾಂಕ 09-10-2025 ರಂದು ಆರೋಪಿಯನ್ನು ಮಂಗಳೂರು ನಗರದ ಉರ್ವ ಸ್ಟೋರ್ ಬಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್ ನಲ್ಲಿ ಕೇಂದ್ರ ಸರಕಾರದಿಂದ ನಿಷೇಧಕ್ಕೊಳಗಾದ Popular Front of India (PFI) ಸಂಘಟನೆಯ ಪರವಾಗಿ ಪೋಸ್ಟ್ ಪ್ರಕಟಿಸಿ, ಸದ್ರಿ ಸಂಘಟನೆಯ ಬಗ್ಗೆ ಸ್ವಯಂ ಪ್ರೇರಿತನಾಗಿ ಪ್ರಚಾರ ಮಾಡಿ ಆತಂಕ ಉಂಟು ಮಾಡಿದ ಕೃತ್ಯವೆಸಗಿದ್ದರಿಂದ, ಪಿ.ಎಸ್.ಐ ರವರು ಸಲ್ಲಿಸಿರುವ ದೂರನ್ನು ಆಧರಿಸಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದರಂತೆ ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಆರೋಪಿಯನ್ನು ಮಾನ್ಯ 49 ನೇ ಹೆಚ್ಚುವರಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ (CCH-50) ಮತ್ತು ಎನ್.ಐ.ಎ. ಪ್ರಕರಣಗಳ ವಿಶೇಷ ನ್ಯಾಯಾಲಯ ಬೆಂಗಳೂರು ಇಲ್ಲಿಗೆ ಹಾಜರುಪಡಿಸಿದ್ದು,ನ್ಯಾಯಾಲಯವು ಆರೋಪಿಯನ್ನು ದಿನಾಂಕ 24-10-2025 ವರೆಗೆ ನ್ಯಾಯಾಂಗ ವಶಕ್ಕೆ ನೀಡಿರುತ್ತಾರೆ.

- Advertisement -

Latest News

error: Content is protected !!