Sunday, June 7, 2026
Homeಕರಾವಳಿಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು 5 ತಿಂಗಳ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ ಪೂಜಾರಿ (43) ಬಂಧಿತ.ಆರೋಪಿ ಬಾಲಕಿಯ ಮನೆಯವರಿಗೆ ಪರಿಚಯಸ್ಥನಾಗಿದ್ದ.ಹತ್ತನೇ ತರಗತಿಯ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ  ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಬಾಲಕಿ ಐದು ತಿಂಗಳ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!