Wednesday, July 2, 2025
HomeUncategorizedಉಡುಪಿ: ದೇವಸ್ಥಾನದಲ್ಲಿ ಕಳವು ಪ್ರಕರಣ, ಆರೋಪಿಯ ಬಂಧನ

ಉಡುಪಿ: ದೇವಸ್ಥಾನದಲ್ಲಿ ಕಳವು ಪ್ರಕರಣ, ಆರೋಪಿಯ ಬಂಧನ

spot_img
- Advertisement -
- Advertisement -

ಉಡುಪಿ : ಇಲ್ಲಿನ ಹಿರೇಬೆಟ್ಟು ದೈವಸ್ಥಾನದಲ್ಲಿ ಕಳ್ಳತನವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಣಿಪಾಲ ಪೊಲೀಸರು ಮೇ 19ರಂದು ಬಂಧಿಸಿದ್ದಾರೆ. ಹಿರೇಬೆಟ್ಟುವಿನ ಭಾಸ್ಕರ್ ಶೆಟ್ಟಿ(49) ಬಂಧಿತ ಆರೋಪಿ.

10 ದಿನಗಳ ಹಿಂದೆ ಹಿರೇಬೆಟ್ಟುವಿನ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ, ಆರತಿ, ಪಂಚಲೋಹದ ಮುಖ, ಹಿತ್ತಾಳೆ ಸಾಮಾಗ್ರಿ, ಗಂಟೆ ಸೇರಿದಂತೆ ಸುಮಾರು 50 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -
spot_img

Latest News

error: Content is protected !!