Tuesday, July 14, 2026
Homeಕರಾವಳಿಮಂಗಳೂರುಮಂಗಳೂರು; ದೊಡ್ಡಪ್ಪನ ಮಗಳ ಮೇಲೆ ಅತ್ಯಾಚಾರ: ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು; ದೊಡ್ಡಪ್ಪನ ಮಗಳ ಮೇಲೆ ಅತ್ಯಾಚಾರ: ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು; ದೊಡ್ಡಪ್ಪನ ಮಗಳ ಮೇಲೆ ಅತ್ಯಾಚಾರ ಮಾಡಿದ  ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ವಿಠಲ ಕುಂಬಾರ ಬಂಧಿತ ಆರೋಪಿ.

ವಿಠಲ ಕುಂಬಾರ ಎಂಬ ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ.ಈ ವಿಚಾರವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!