Monday, May 6, 2024
Homeತಾಜಾ ಸುದ್ದಿನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಮುತ್ತು ಕೊಟ್ಟ ಪತಿ : ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಮುತ್ತು ಕೊಟ್ಟ ಪತಿ : ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

spot_img
- Advertisement -
- Advertisement -

ಉತ್ತರ ಪ್ರದೇಶ: ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಪತ್ನಿಗೆ ಮುತ್ತು ಕೊಟ್ಟ ಪತಿ ಮಹಾಶಯನೊಬ್ಬನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯ ಸರಯೂ ನದಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರಯೂ ನದಿಯಲ್ಲಿ ದಂಪತಿ ಸ್ನಾನ ಮಾಡುತ್ತಿದ್ದರು. ಈ ವೇಳೆ ಗಂಡ ಹೆಂಡ್ತಿಗೆ ಮುತ್ತು ನೀಡಿದ್ದಾನೆ.  ಈ ವೇಳೆ ಅಲ್ಲಿದ್ದ ಸ್ಥಳೀಯರು ಮುತ್ತು ನೀಡಿದಾತನನ್ನು ಎಳೆದೊಯ್ದು ಥಳಿಸಿದ್ದಾರೆ. ಹೆಂಡತಿ ತನ್ನ ಗಂಡನನ್ನು ರಕ್ಷಿಸಲು ಪ್ರಯತ್ನಿಸಿದರೂ, ವಿಫಲವಾಗಿದ್ದಾಳೆ. ಅಯೋಧ್ಯೆಯಲ್ಲಿ ಇಂತಹ ಅಸಭ್ಯತೆಯನ್ನು ಸಹಿಸುವುದಿಲ್ಲ ಎಂದು ಥಳಿಸಿದ್ದಾರೆ.

ಸದ್ಯ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಯೋಧ್ಯಾ ಪೊಲೀಸರು ತಿಳಿಸಿದ್ದಾರೆ. ಸರಯೂ ಗಂಗೆಯ ಏಳು ಉಪನದಿಗಳಲ್ಲಿ ಒಂದಾಗಿದೆ. ಇದನ್ನು ಹಿಂದೂಗಳು ಪವಿತ್ರವೆಂದು ಪರಿಗಣಿಸುತ್ತಾರೆ. ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯು ಸರಯೂ ನದಿಯ ದಡದಲ್ಲಿದೆ.

- Advertisement -
spot_img

Latest News

error: Content is protected !!