Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ; ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ

ಬೆಳ್ತಂಗಡಿ; ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ

- Advertisement -
- Advertisement -

ಬೆಳ್ತಂಗಡಿ; ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳ್ತಂಗಡಿಯ ಅರಸಿನಮಕ್ಕಿಯಲ್ಲಿ ನಡೆದಿದೆ.

ಅರಸಿಮಕ್ಕಿಯ ತ್ಯಡ್ಕ ಗ್ರಾಮದ ನಿವಾಸಿ ರೆಜಿ ಕೆ.ಎ ಅವರ ಮಗ  ಅಲ್ಬಿನ್ ಕೆ.ಆರ್ ರವರಿಗೆ ಪೋಲ್ಯಾಂಡ್‌ ನಲ್ಲಿ ಕೆಲಸಕ್ಕೆ ಹೋಗಲು ಆಮನೋಜ್ ಎಂಬಾತನು ವೀಸಾ ಕೊಡಿಸುವುದಾಗಿ ನಂಬಿಸಿ, ದಿನಾಂಕ: 22.05.2023  ರಿಂದ 19-03-2024 ರ ಅವಧಿಯಲ್ಲಿ ವಿವಿಧ ಕಾರಣಗಳನ್ನು ನೀಡಿ ಹಂತಹಂತವಾಗಿ ಒಟ್ಟು 2,50,000 ರೂಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು, ಈವರೆಗೆ ವೀಸಾವನ್ನು ಕೊಡಿಸದೇ ಹಾಗೂ ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ್ದಾರೆ. ಈ ಬಗ್ಗೆ ಅಲ್ಬಿನ್ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 18/2024 ಕಲಂ:  417,420 ಐ ಪಿ ಸಿ ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!