- Advertisement -
![]()
- Advertisement -
ವಿಟ್ಲದಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಠಲ ಪೂಜಾರಿ ಅತಿಕಾರಬೈಲು (49) ಮೃತ ದುರ್ದೈವಿ.
ಧಾರ್ಮಿಕ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದ ಅವರು, ಯುವಕೇಸರಿ ಅತಿಕಾರಬೈಲು ಸಂಘಟನೆ, ಚಂದಳಿಕೆ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾಗಿ ಸೇರಿದಂತೆ ಬಿಲ್ಲವ ಸಂಘದಲ್ಲೂ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಆಗಲಿದ್ದಾರೆ..
- Advertisement -


