Thursday, June 4, 2026
Homeಕರಾವಳಿಪತ್ನಿಯ ಅನಾರೋಗ್ಯದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಪತ್ನಿಯ ಅನಾರೋಗ್ಯದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು : ಪತ್ನಿ ಅನಾರೋಗ್ಯದಿಂದ ಮನನೊಂದು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಉಳ್ಳಾಲ ಸಿ ಗ್ರೌಂಡ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಶ್ವತ್(50) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಅಶ್ವತ್ಥ್ ಅವರ ಪತ್ನಿ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ. ಪತ್ನಿಯನ್ನು ಅಸಹಾಯಕ ಸ್ಥಿತಿ ನೋಡಿ ಮಾನಸಿಕ ಖಿನ್ನತೆಗೆ ಒಳಗಾಗಿ ಅಶ್ವತ್ಥ್ ಕೆಲ ಕಾಲ ಆಸ್ಪತ್ರೆಗೆ ದಾಖಲು ಆಗಿದ್ದರು. ಬಳಿಕ ಚಿಕಿತ್ಸೆ ಪಡೆದು ನಿನ್ನೆ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು. ಬಂದ ಕೂಡಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!