- Advertisement -
- Advertisement -
ಸುಳ್ಯ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ಪಡ್ಪಿನಂಗಡಿ ಸುಬ್ಬಪ್ಪ ಗೌಡ(60) ಮೃತ ದುರ್ದೈವಿ.
ಸುಬ್ಬಪ್ಪ ಗೌಡ ಅವರು ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಹಿಂಬದಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ವಿಷಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬೆಳ್ಳಾರೆ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ . ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಕಮಲ, ಪುತ್ರಿ ಹರಿಣಾಕ್ಷಿ ಹರೀಶ್, ಮೊಮ್ಮಗಳು ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
- Advertisement -