Thursday, June 4, 2026
Homeಕರಾವಳಿಸಾಲ ತೀರಿಸಲಾಗದೆ ಬೆಳ್ತಂಗಡಿಯಲ್ಲಿ ವ್ಯಕ್ತಿ ನೇಣಿಗೆ ಶರಣು

ಸಾಲ ತೀರಿಸಲಾಗದೆ ಬೆಳ್ತಂಗಡಿಯಲ್ಲಿ ವ್ಯಕ್ತಿ ನೇಣಿಗೆ ಶರಣು

- Advertisement -
- Advertisement -

ಬೆಳ್ತಂಗಡಿ: ಸಾಲ ತೀರಿಸಲಾಗದೇ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ.

ಲಾಯಿಲ ಗ್ರಾಮದ ರಾಘವೇಂದ್ರ ಮಠದ ಬಳಿಯ ನಿವಾಸಿ ಸಂಜೀವ ಸಫಲ್ಯ ಆತ್ಮಹತ್ಯೆ ಶರಣಾದವರು. ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದ ಇವರು, ವಿಪರೀತ ಕುಡಿತದ‌ ಚಟ ಹೊಂದಿದ್ದರು. ಅಲ್ಲದೇ ಫೈನಾನ್ಸ್ ನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೇ ಇವರ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ. ಇದೇ ವಿಚಾರಕ್ಕೆ ಮನನೊಂದು ತನ್ನ ಮನೆಯ ಕೋಣೆಯಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!