Wednesday, June 3, 2026
HomeUncategorizedಕಡಬದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕಡಬದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

- Advertisement -
- Advertisement -

ಕಡಬ :ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೊಣಾಜೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ ಕಿರಣ್ ಎಂದು ಗುರುತಿಸಲಾಗಿದೆ.

ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚೆಗೆ ವೈಯಕ್ತಿಕ ಕಾರಣಕ್ಕಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಬಚಾವಾಗಿದ್ದ. ಇಂದು ಸಂಜೆ ವೇಳೆಗೆ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿದ್ದ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.

- Advertisement -

Latest News

error: Content is protected !!