Monday, June 8, 2026
Homeಕರಾವಳಿಪುತ್ತೂರು: ದಿನಸಿ ಅಂಗಡಿ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು: ದಿನಸಿ ಅಂಗಡಿ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ದಿನಸಿ ಅಂಗಡಿ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ  ಕುರಿಯ ಗ್ರಾಮದ ಹೊಸಮಾರು ಎಂಬಲ್ಲಿ ನಡೆದಿದೆ.

ಹೊಸಮಾರು ನಿವಾಸಿ, ವಿಷ್ಣುನಗರ ಎಂಬಲ್ಲಿ ವ್ಯಾಪಾರ ನಡೆಸುತ್ತಿದ್ದ ರಮೇಶ್ ಶೆಟ್ಟಿ (54) ಆತ್ಮಹತ್ಯೆ ಮಾಡಿಕೊಂಡವರು. ವಿಷ ಸೇವಿಸಿ ತೀರಾ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಕಳೆದ ಒಂದು ವರ್ಷದಿಂದ ಅವರು ವಿಪರೀತ ತಲೆನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖವಾಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಂಬಂಧಿಕ ಸುಧಾಕರ ಶೆಟ್ಟಿ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.

ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Latest News

error: Content is protected !!