- Advertisement -
![]()
- Advertisement -
ಸುಳ್ಯ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ (35) ಎಂಬವರು ಕಳೆದ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೂ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನಷ್ಟೆ ತಿಳಿದುಬರಬೇಕಾಗಿದೆ.
- Advertisement -


