Thursday, June 4, 2026
Homeಕರಾವಳಿವಿಟ್ಲದಲ್ಲಿ ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ವಿಟ್ಲದಲ್ಲಿ ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ವಿಟ್ಲ: . ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ (75) ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ 10:30ರ ವೇಳೆಗೆ ತಮ್ಮನ ಮನೆಗೆ ಹೋಗಿದ್ದರು. ಇಂದು ಬೆಳಗ್ಗೆ 07.30 ವೇಳೆಗೆ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬಾಬು ಆಚಾರ್ಯ ಅವರು ಮಧುಮೇಹ ಹಾಗೂ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದುರು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!