Saturday, June 6, 2026
Homeಕರಾವಳಿಬೆಳ್ತಂಗಡಿ : ಅನಾರೋಗ್ಯದಿಂದ ನೊಂದು ವ್ಯಕ್ತಿ  ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಅನಾರೋಗ್ಯದಿಂದ ನೊಂದು ವ್ಯಕ್ತಿ  ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಳ್ತಂಗಡಿ : ಅನಾರೋಗ್ಯದಿಂದ ನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಟತ್ತಾಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಕುತ್ರಿಜಾಲು ಅನೀಶ್ ಎಂಬವರ ಬಾಡಿಗೆ ಮನೆಯಲ್ಲಿ ತೋಟತ್ತಾಡಿ ನಿವಾಸಿ ರಮೇಶ್(45) ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1 ರಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟ ರಮೇಶ್ ಗಂಡಿಬಾಗಿಲು ಸಮೀಪದ ಬಯಲು ಎಂಬಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಇವರಿಗೆ ಅನಾರೋಗ್ಯ ಕೂಡ ಇದ್ದು ಅದಲ್ಲದೆ ವಿಪರೀತ ಕುಡಿತದ ಚಟ ಹೊಂದಿದ್ದು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ನಿ ಗೀತಾ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Latest News

error: Content is protected !!