Thursday, June 4, 2026
Homeಕರಾವಳಿಬೆಳ್ತಂಗಡಿ : ಸಾಲದ ಸಮಸ್ಯೆಯಿಂದ ನೊಂದು  ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ : ಸಾಲದ ಸಮಸ್ಯೆಯಿಂದ ನೊಂದು  ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ವ್ಯಕ್ತಿಯೊಬ್ಬರು ಸಾಲದ ಸಮಸ್ಯೆಯಿಂದ ಬೇಸತ್ತು ಮನೆಯ ಪಕ್ಕದ ರಬ್ಬರ್ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಡಿಬಾಗಿಲಿನಲ್ಲಿ ಇಂದು ನಡೆದಿದೆ‌.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಡೋಮಿನಿಕ್(50) ಮನೆಯ ಸಮೀಪವೇ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.ಕೃಷಿಕರಾಗಿದ್ದ ಡೋಮಿನಿಕ್  ಸಾಲದ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ.

ಬುಧವಾರ ಬೆಳಿಗ್ಗೆ ಮನೆಯ ಸಮೀಪವಿರುವ ರಬ್ಬರ್ ತೋಟದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ  ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.‌ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!