- Advertisement -
- Advertisement -
ಬಂಟ್ವಾಳ: ಉಳ್ಳಾಲದಿಂದ ಬಂಟ್ವಾಳದ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿರುವ ಪತ್ನಿಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಉಳ್ಳಾಲದ ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆ ಮಾಡಿಕೊಂಡವರು.
ಸೆಪ್ಟಂಬರ್ 10 ರಂದು ಅವರು ಪತ್ನಿಯ ಮನೆಗೆ ಬಂದಿದ್ದರು. ಮಧ್ಯಾಹ್ನ 12ರ ಸುಮಾರಿಗೆ ಪತ್ನಿ ಹಾಗೂ ಪುತ್ರನನ್ನು ಸಂಬಂಧಿಕರ ಮನೆಯ ಶುಭ ಕಾರ್ಯಕ್ಕೆ ಬಿಟ್ಟು ಪತ್ನಿಯ ಮನೆಯಲ್ಲಿ ಒಬ್ಬರೇ ಉಳಿದುಕೊಂಡಿದ್ದರು. ಸಂಜೆ ಪತ್ನಿ ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ. ಆತಂಕಗೊಂಡು ನೆರೆ ಮನೆಯವರಲ್ಲಿ ನೋಡುವಂತೆ ಹೇಳಿದಾಗ ರವೀಂದ್ರ ಅವರು ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ. ಆರ್ಥಿಕ ಸಮಸ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -