- Advertisement -
- Advertisement -
ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುದುವೆಟ್ಟು ಎಂಬಲ್ಲಿ ಆ.31 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ತಂದೆ ಸತೀಶ್,ತಾಯಿ ಸ್ವಾತಿ ಹಾಗೂ ಸಹೋದರಿ, ಕುಟುಂಬ ವರ್ಗವನ್ನು ಅಗಲಿದ್ದಾರೆ.
- Advertisement -