Thursday, June 4, 2026
Homeಕರಾವಳಿಉಡುಪಿಉಡುಪಿ;  ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಉಡುಪಿ;  ಬಾವಿಗೆ ಹಾರಿ ಯುವಕ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದ ಕಾಡೂರು ಬೆಳ್ತಾಡಿಯಲ್ಲಿ ನಡೆದಿದೆ. ಕಾಡೂರು ಬೆಳ್ತಾಡಿಯ ಅನೂಪ ಕುಮಾರ್ ಶೆಟ್ಟಿ (31) ಮೃತ ದುರ್ದೈವಿ. ಅನೂಪ್ ಶೆಟ್ಟಿ ವಿಪರೀತ ಮದ್ಯಪಾನದ ಅಭ್ಯಾಸ ಹೊಂದಿದ್ದರು ಎನ್ನಲಾಗಿದ್ದು,  ಜೀವನದಲ್ಲಿ ಜಿಗುಪ್ಸೆಗೊಂಡು ಕುತ್ತಿಗೆಗೆ ಹಗ್ಗ ಕಟ್ಟಿಕೊಂಡು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಅನೂಪ್ ಅಜ್ಜ ಶೇಖರ ಶೆಟ್ಟಿ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!