Thursday, June 4, 2026
Homeಕರಾವಳಿಉಡುಪಿತಂದೆ ತಾಯಿಯ ಅಗಲಿಕೆಯಿಂದ ನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆ

ತಂದೆ ತಾಯಿಯ ಅಗಲಿಕೆಯಿಂದ ನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಉಡುಪಿ: ತಂದೆ ತಾಯಿಯ ನಿಧನದಿಂದ ಮನನೊಂದ ಯುವಕನೋರ್ವ ಮನೆಯ ಸಮೀಪದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಉಡುಪಿ ಜಿಲ್ಲೆಯ ಹಿರಿಯಡ್ಕದ ಪಂಡುಕಟ್ಟೆ ಎಂಬಲ್ಲಿ ನಡೆದಿದೆ.

ಕೃತಿಕ್ (22) ಮೃತ ಯುವಕ. ಈತ ಪದವಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಇದ್ದು, ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದನು. ಈತನ ತಂದೆ ಐದು ತಿಂಗಳ ಹಿಂದೆ ಮರದಿಂದ ಬಿದ್ದು ಮೃತಪಟ್ಟಿದ್ದರು.

ಅಲ್ಲದೆ, ತಾಯಿ ಕೂಡ ಒಂದು ವರ್ಷ ಹಿಂದೆ ಮೃತಪಟ್ಟಿದ್ದರು. ತಂದೆ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಈತ ಮನೆಯ ಹತ್ತಿರವಿದ್ದ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. .ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!