Thursday, May 16, 2024
Homeಕರಾವಳಿಕಡಬ: ಕೋಂಡಿಬಾಳದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಡಬ: ಕೋಂಡಿಬಾಳದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

spot_img
- Advertisement -
- Advertisement -

ಕಡಬ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬದ ಕೋಡಿಂಬಾಳದಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ಕಜೆಮೂಲೆ ನಿವಾಸಿ ಮಹಮ್ಮದ್ ಆತ್ಮಹತ್ಯೆಗೆ ಶರಣಾದವರು.

ಕೋಡಿಂಬಾಳದ  ಕಾರ್ಖಾನೆ ಎಂಬಲ್ಲಿ  ಮಾವಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಮ್ಮದ್ 6 ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಅಲ್ಲದೇ ಯಾವುದೇ ಕೆಲಸ ಮಾಡಲು ಆಗದೆ ಇದ್ದುದರಿಂದ ಮಾನಸಿಕವಾಗಿ ನೊಂದಿದ್ದರು.  ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!