Sunday, June 7, 2026
Homeಕರಾವಳಿಉಡುಪಿಉಡುಪಿ: ಶಾಲೆಯಲ್ಲಿ ನೇಣು ಬಿಗಿದು ಕೊಂಡು ಯುವಕ ಆತ್ಮಹತ್ಯೆ

ಉಡುಪಿ: ಶಾಲೆಯಲ್ಲಿ ನೇಣು ಬಿಗಿದು ಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಶಾಲೆಯಲ್ಲಿ  ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ನೀಲಾವರ ಮಹಿಷ ಮರ್ದಿನಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ನಡೆದಿದೆ.

ನೀಲಾವರ ನಿವಾಸಿ 32 ವರ್ಷದ ಗಿರೀಶ್ ಆತ್ಮಹತ್ಯೆಗೆ ಶರಣಾದ ಯುವಕ. ಈತ ಅವಿವಾಹಿತನಾಗಿದ್ದು, ವಿಪರೀತ ಮದ್ಯಸೇವನೆ ಚಟ ಹೊಂದಿದ್ದನು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು  ಶಾಲೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!