Wednesday, May 15, 2024
Homeಕರಾವಳಿಮಂಗಳೂರು; ಸಂಘದ ಸಾಲ ಕಟ್ಟದ್ದನ್ನು ಪ್ರಶ್ನಿಸಿದ್ದಕ್ಕೆ ಅವಮಾನ; ವ್ಯಕ್ತಿ ನೇಣಿಗೆ ಶರಣು

ಮಂಗಳೂರು; ಸಂಘದ ಸಾಲ ಕಟ್ಟದ್ದನ್ನು ಪ್ರಶ್ನಿಸಿದ್ದಕ್ಕೆ ಅವಮಾನ; ವ್ಯಕ್ತಿ ನೇಣಿಗೆ ಶರಣು

spot_img
- Advertisement -
- Advertisement -

ಮಂಗಳೂರು; ಸಂಘದ ಸಾಲ ಕಟ್ಟದ್ದಕ್ಕೆ ಪ್ರಶ್ನಿಸಿದ್ದಕ್ಕೆ ಅವಮಾನಗೊಂಡು ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ  ಸೋಮವಾರ ಮುಂಜಾನೆ ನಡೆದಿದೆ.

ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡಿಸಿದ್ದರು ಎನ್ನಲಾಗಿದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!