Friday, June 5, 2026
Homeಕರಾವಳಿಬೆಳ್ತಂಗಡಿ :  ದಿಡುಪೆಯ ಸಂಬಂಧಿಕರ ಮನೆಗೆ ಬಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ :  ದಿಡುಪೆಯ ಸಂಬಂಧಿಕರ ಮನೆಗೆ ಬಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ಸಂಬಂಧಿಕರ ಮನೆಗೆ ಬಂದು ವ್ಯಕ್ತಿಯೊಬ್ಬರು ವಾಪಸ್ ಮಂಗಳೂರಿಗೆ ಕೆಲಸಕ್ಕೆ ಹೋಗುವಾಗ ಆತ್ಮಹತ್ಯೆ ಮಾಡಿಕೊಂಡ ಘಟನೆ ದಿಡುಪೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ದಿಡುಪೆಯ ಶ್ರೀಧರ್ ಗೌಡ ಎಂಬವರ ಮನೆಗೆ ಸಂಬಂಧಿಯಾಗಿರುವ ಮೂಲತಃ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಜಯಂತ ಗೌಡ (45) ಎಂಬವರು ಗುರುವಾರ ಬಂದಿದ್ದು ಶುಕ್ರವಾರ ವಾಪಸ್ ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಮನೆಯವರಲ್ಲಿ ಹೇಳಿ ಹೋಗಿದ್ದು ಆದ್ರೆ ದಿಡುಪೆ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಬಂದು ಹಿಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಪ್ರಯಾಣಿಕರು ಬಂದಾಗ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ.

ಜಯಂತ್ ಗೌಡ ಮಂಗಳೂರಲ್ಲಿ ಮನೆ ಮಾಡಿ ವಾಸವಾಗಿದ್ದು ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!