Saturday, June 6, 2026
Homeಕರಾವಳಿಬೆಳ್ತಂಗಡಿ : ಕಲ್ಮಂಜದಲ್ಲಿ ತೋಟಕ್ಕೆ ಹೋದ ವ್ಯಕ್ತಿ ಸಾವು

ಬೆಳ್ತಂಗಡಿ : ಕಲ್ಮಂಜದಲ್ಲಿ ತೋಟಕ್ಕೆ ಹೋದ ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ : ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಸಾವನ್ನಪ್ಪಿದ ಘಟನೆ ಕಲ್ಮಂಜದಲ್ಲಿ ಇಂದು ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ(43) ಎಂಬವರು ಇಂದು ತೋಟಕ್ಕೆ ಹೋದವರು ವಾಪಸ್ ಬಂದಿರಲ್ಲಿಲ್ಲ. ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ.  ಸಂಜೆ ವೇಳೆಗೆ ಅವರು ತೋಟದಲ್ಲಿ ಬಿದ್ದು ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ. ಶವವನ್ನು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

ಈ ಬಗ್ಗೆ ಮನೆ ಮಂದಿ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್.ಡಿ ತಂಡ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮೃತರ ಸಂಬಂಧಿ‌ ಹಾಗೂ ಸ್ಥಳೀಯ ನಿವಾಸಿಗಳಾದ ಹರೀಶ ಗೌಡ ಮತ್ತು ಇತರರ ವಿರುದ್ಧ ಧರ್ಮಸ್ಥಳ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಅಪಾಯದ ಅರಿವಿದ್ರೂ ಅಕ್ರಮವಾಗಿ ತೋಟದ ಸುತ್ತ ಕರೆಂಟ್‌ ಬೇಲಿ ಅಳವಡಿಸಿದ್ದಕ್ಕೆ ದೂರು ದಾಖಲಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!