Wednesday, June 24, 2026
Homeಕರಾವಳಿಕೆಲ ದಿನಗಳ ಹಿಂದೆ ಪುತ್ತೂರಿನಲ್ಲಿ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಕೆಲ ದಿನಗಳ ಹಿಂದೆ ಪುತ್ತೂರಿನಲ್ಲಿ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಪುತ್ತೂರು ಕೆಲವು ದಿನಗಳ ಹಿಂದೆ ಪುತ್ತೂರಿನ ದರ್ಬೆ ಬೈಪಾಸ್ ನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಲ್ಲಿನ ಸಂಟ್ಯಾರಿನ ಕೈಕಾರ ನಿವಾಸಿ ಯುವಕ ರಾಜೇಶ್ ನಾಯ್ಕ(24) ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ರಾಜೇಶ್ ನಾಯ್ಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಅವರು ನಿಧನರಾಗಿದ್ದಾರೆ.ಮೃತರು ತಾಯಿ, ಅಕ್ಕ, ಅಣ್ಣಂದಿರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!