Thursday, June 25, 2026
Homeಕರಾವಳಿಪುತ್ತೂರು; ಎನ್ ಐ ಎ ಅಧಿಕಾರಿಗಳು ಸಂಚರಿಸುತ್ತಿದ್ದ ವಾಹನ ಹಾಗೂ ಬೈಕ್ ಮಧ್ಯೆ ಅಪಘಾತ; ಪಾಣಾಜೆ...

ಪುತ್ತೂರು; ಎನ್ ಐ ಎ ಅಧಿಕಾರಿಗಳು ಸಂಚರಿಸುತ್ತಿದ್ದ ವಾಹನ ಹಾಗೂ ಬೈಕ್ ಮಧ್ಯೆ ಅಪಘಾತ; ಪಾಣಾಜೆ  ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಓ ಸಾವು

- Advertisement -
- Advertisement -

ಪುತ್ತೂರು; ಎನ್ ಐ ಎ ಅಧಿಕಾರಿಗಳು ಸಂಚರಿಸುತ್ತಿದ್ದ ವಾಹನ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಪಾಣಾಜೆ  ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಓ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಸಂಪ್ಯ ಠಾಣೆಯ ಮುಂಭಾಗದಲ್ಲಿ ನಡೆದಿದೆ. ಲಕ್ಷ್ಮಣ ನಾಯ್ಕ ಬಿ. (50) ಮೃತ ದುರ್ದೈವಿ.

ಪೊಲೀಸ್ ವಾಹನ ಜಿಲ್ಲೆಯ ಡಿ. ಆರ್. ಗೆ ಸೇರಿದ್ದಾಗಿದ್ದು, ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಸಂದರ್ಭ ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದ ಲಕ್ಷ್ಮಣ ನಾಯ್ಕ ಅವರ ಬೈಕ್  ಡಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡು ಅವರು ಸಾವನ್ನಪ್ಪಿದ್ದಾರೆ.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳ ತಂಡ ಪುತ್ತೂರಿಗೆ ಆಗಾಗ ಆಗಮಿಸುತ್ತದೆ. ಆಗ ರಾಜ್ಯ ಪೊಲೀಸ್ ವಾಹನವನ್ನು ಅವರ ಸಂಚಾರಕ್ಕೆ ಬಳಸಿಕೊಳ್ಳಲಾಗುತ್ತದೆ.

- Advertisement -

Latest News

error: Content is protected !!