Thursday, June 4, 2026
Homeಕರಾವಳಿಬಂಟ್ವಾಳ: ಸ್ಕೂಟರ್‌ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ;ಸ್ಕೂಟರ್ ಸವಾರ ಸಾವು  

ಬಂಟ್ವಾಳ: ಸ್ಕೂಟರ್‌ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ;ಸ್ಕೂಟರ್ ಸವಾರ ಸಾವು  

- Advertisement -
- Advertisement -

ಬಂಟ್ವಾಳ: ಸ್ಕೂಟರ್‌ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತವಾಗಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.

ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ ಸವಾರ ನಾರಾಯಣ ಎಂಬವರು ಸ್ಕೂಟರ್‌ ಸಮೇತ ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರೋದು ಗೊತ್ತಾಗಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!