Saturday, May 18, 2024
Homeಕರಾವಳಿಉಪ್ಪಿನಂಗಡಿ ; ವಿದ್ಯಾರ್ಥಿಯ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಸಾವು

ಉಪ್ಪಿನಂಗಡಿ ; ವಿದ್ಯಾರ್ಥಿಯ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಸಾವು

spot_img
- Advertisement -
- Advertisement -

ಉಪ್ಪಿನಂಗಡಿ ; ವಿದ್ಯಾರ್ಥಿಯ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಇಳಂತಿಲದ ಫೆರ್ನಾಂಡೀಸ್ (64) ಮೃತ ದುರ್ದೈವಿ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಂ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ ಗ್ರಾಮದ ನಿತಿನ್ ಕಾಲೇಜಿಗೆ ಬರುವಾಗ ಪಾದಚಾರಿ ಇಳಂತಿಲದ ಫೆರ್ನಾಂಡೀಸ್ ಎಂಬವರಿಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಫೆರ್ನಾಂಡೀಸ್ ಸಾವನ್ನಪ್ಪಿದ್ದಾರೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಫೆರ್ನಾಂಡೀಸ್ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸಣ್ಣ ಪುಟ್ಟ ಗಾಯಗೊಂಡ ನಿತಿನ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!