Thursday, March 28, 2024
Homeಕರಾವಳಿದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು

ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು

spot_img
- Advertisement -
- Advertisement -

ಮಂಗಳೂರು: ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ವಿಮಾನ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಕ್ಕ ನಿವಾಸಿ ಮುಹಮ್ಮದ್ (65) ಮೃತ ದುರ್ದೈವಿ.

ಮಹಮ್ಮದ್ ಅವರ ಪತ್ನಿ ದುಬೈನಲ್ಲಿರುವ ಮಗಳ ಬಳಿ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಲು ಗುರುವಾರ ದುಬೈಗೆ ತೆರಳಿ ಭಾನುವಾರ ಹಿಂದಿರುಗುತ್ತಿದ್ದರು ಎಂದು ತಿಳಿದು ಬಂದಿದೆ.

ದುಬೈನಿಂದ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಎಮಿಗ್ರೇಶನ್ ವಿಭಾಗದಲ್ಲಿ ನಿರ್ಗಮನದ ಸಹಿ ಹಾಕಲು ಅಧಿಕಾರಿಗಳಿಗೆ ಪಾಸ್ ಪೋರ್ಟ್ ನೀಡಿ ನಿಂತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ವಿಮಾನ ನಿಲ್ದಾಣದ ಆಯಂಬುಲೆನ್ಸ್ ಮೂಲಕ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮುಹಮ್ಮದ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದರು ಎಂದು ಅವರ ಸಹೋದರಿಯ ಪತಿ ಶರೀಫ್ ಅವರು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!