Tuesday, August 11, 2026
Homeಕರಾವಳಿಮಂಗಳೂರುಬೆಳ್ತಂಗಡಿ:ನೀರಚಿಲುಮೆಯ ತಿರುವಿನಲ್ಲಿ ಕೆಎಸ್‌ಆರ್ಟಿಸಿ ಬಸ್‌ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ...

ಬೆಳ್ತಂಗಡಿ:ನೀರಚಿಲುಮೆಯ ತಿರುವಿನಲ್ಲಿ ಕೆಎಸ್‌ಆರ್ಟಿಸಿ ಬಸ್‌ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

- Advertisement -
- Advertisement -

ಬೆಳ್ತಂಗಡಿ:ನೀರಚಿಲುಮೆಯ ತಿರುವಿನಲ್ಲಿ  ಕೆಎಸ್‌ಆರ್ಟಿಸಿ ಬಸ್‌ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆ11 ರಂದು ಬೆಳಗ್ಗೆ ನಡೆದಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್‌ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಉಜಿರೆಯ ನೀರಚಿಲುಮೆಯಲ್ಲಿ  ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಪಂಗಳ ನಿವಾಸಿ ಸೋಮನಾಥ (25) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್‌ನಲ್ಲಿ ಸಹಸವಾರ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಬಳ್ಳಮಂಜದ ಭರತ್(35) ಇವರು ಗಂಭೀರವಾಗಿ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಳಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಪಘಾತದಿಂದಾಗಿ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು.

- Advertisement -

Latest News

error: Content is protected !!