Thursday, June 4, 2026
Homeಕರಾವಳಿಕಾಸರಗೋಡುಅಬುದಾಬಿಯ ರೆಸ್ಟೋರೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಕಾಸರಗೋಡಿನ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಅಬುದಾಬಿಯ ರೆಸ್ಟೋರೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಕಾಸರಗೋಡಿನ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಕಾಸರಗೋಡು: ಅಬುದಾಬಿಯ ರೆಸ್ಟೋರೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಕಾಞಂಗಾಡ್ ನಿವಾಸಿ ಧನೇಶ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಧನೇಶ್ ಅದೇ ರೆಸ್ಟೋರೆಂಟ್ ನಲ್ಲಿ  ಆಹಾರ ಸೇವಿಸುತ್ತಿದ್ದಾಗ ಸಿಲಿಂಡರ್ ಸ್ಫೋಟವಾಗಿದೆ. ಪರಿಣಾಮ ಅವರಿಗೆ   ಶೇ.80ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿತ್ತು. ಅಬುದಾಬಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೇ  ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಸಿಲಿಂಡರ್ ಸ್ಫೋಟದಲ್ಲಿ 120ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವಾರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!