Friday, June 5, 2026
Homeಕರಾವಳಿಉಡುಪಿಕುಂದಾಪುರ: ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಓಮ್ನಿ ಢಿಕ್ಕಿ ; ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕುಂದಾಪುರ: ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಓಮ್ನಿ ಢಿಕ್ಕಿ ; ಚಿಕಿತ್ಸೆಗೆ ಸ್ಪಂದಿಸದೆ ಸಾವು

- Advertisement -
- Advertisement -

ಕುಂದಾಪುರ: ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಓಮ್ನಿ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಚಂದ್ರ ಮೃತ ವ್ಯಕ್ತಿ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಓಮ್ನಿ ಕಾರನ್ನು ಅದರ ಚಾಲಕ ಲವ ಕುಮಾರ ಎಂಬುವವನು ಅತೀ ವೇಗ ಹಾಗೂ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿಕೊಂಡು ರಸ್ತೆಯ ತೀರ ಎಡಬದಿಗೆ ಬಂದು ರಸ್ತೆಯ ಪೂರ್ವಬದಿಯಲ್ಲಿ ನಿಂತುಕೊಂಡಿದ್ದ ಚಂದ್ರರವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರ ತಲೆಗೆ ಹಾಗೂ ಬಲಕಾಲಿಗೆ ತೀವ್ರ ಸ್ವರೂಪದ ರಕ್ತಗಾಯವಾಗಿದ್ದು, ತಕ್ಷಣ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದ್ರೆ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಓಮ್ನಿ ಕಾರ್ ನಲ್ಲಿದ್ದ ಅನುಸೂಯ ಮತ್ತು ರಮಾಮಣಿ ರವರಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!