Thursday, June 4, 2026
Homeಕರಾವಳಿಮಂಗಳೂರು ಮಂಗಳೂರು: ವಿದ್ಯುತ್ ಸ್ಪರ್ಶಿಸಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

 ಮಂಗಳೂರು: ವಿದ್ಯುತ್ ಸ್ಪರ್ಶಿಸಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು: ವಿದ್ಯುತ್ ಸ್ಪರ್ಶಿಸಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ  ಕಾವೂರಿನಲ್ಲಿ ನಡೆದಿದೆ. ಇಲ್ಲಿನ ಪೆಟ್ರೋಲ್ ಪಂಪ್‌ನಲ್ಲಿ ಏಣಿಯೊಂದು ಹೈಟೆನ್ಶನ್ ತಂತಿಗೆ ತಗುಲಿದ ಪರಿಣಾಮ ಉತ್ತರ ಪ್ರದೇಶದ ವಾರಣಾಸಿ ನಿವಾಸಿ, ಪೆಟ್ರೋಲ್‌ ಪಂಪ್‌ ಸಿಬ್ಬಂದಿ ಸಂದೀಪ್ ಕುಮಾರ್ ವರ್ಮಾ ಗಂಭೀರ ಗಾಯಗೊಂಡಿದ್ದರು. ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಪಂಪ್‌ನಲ್ಲಿ ಎಲೆಕ್ಟ್ರಿಶಿಯನ್‌ ಆಗಿ ಕೆಲಸ ಮಾಡುತ್ತಿದ್ದ ಅವರು  ಏಣಿ ಕೊಂಡೊಯ್ದು ವಿದ್ಯುತ್‌ ಕಂಬಕ್ಕೆ ಒರಗಿಸಿಟ್ಟಿದ್ದರು. ಈ ಸಂದರ್ಭ ವಿದ್ಯುತ್‌ ಪ್ರವಹಿಸಿ ಸಂದೀಪ್‌ ಕುಮಾರ್‌ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರಾದರೂ, ಆ ವೇಳೆಗಾಗಲೇ ಮೃತಪಟ್ಟಿದ್ದಾರೆ. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!