Wednesday, May 1, 2024
Homeಕರಾವಳಿಮಂಗಳೂರುಬೆಳ್ತಂಗಡಿ: ಪಿಕಪ್‌ ಹಿಮ್ಮುಖವಾಗಿ ಚಲಿಸಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ...

ಬೆಳ್ತಂಗಡಿ: ಪಿಕಪ್‌ ಹಿಮ್ಮುಖವಾಗಿ ಚಲಿಸಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

spot_img
- Advertisement -
- Advertisement -

ಬೆಳ್ತಂಗಡಿ: ಪಿಕಪ್‌ ಹಿಮ್ಮುಖವಾಗಿ ಚಲಿಸಿ  ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ನಡೆದಿದೆ. ರುಕ್ಮ ಮುಗೇರ ಮೃತ ದುರ್ದೈವಿ.

ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ ಗೊಬ್ಬರ ಲೋಡ್‌ ಮಾಡಿಕೊಂಡು ಬರಲು ತೆರಳಿದ್ದರು. ಈ ವೇಳೆ ಶಿಬಾಜೆ ಬಳಿ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಈ ವೇಳೆ ಪಿಕಪ್ ಚಾಲಕ ಜಯೇಶ್‌ ಅವರು ದುಡುಕುತನದಿಂದ ಪಿಕಪ್ ನ್ನು ಹಿಮ್ಮುಖವಾಗಿ ಚಲಾಯಿಸಿದಾಗ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ.

ಪರಿಣಾಮ, ರುಕ್ಮ ಮುಗೇರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರಿಗೆ ಉಜಿರೆಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.ಈ ಬಗ್ಗೆ ಉಪೇಂದ್ರ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!