Thursday, June 4, 2026
Homeಕರಾವಳಿಪುತ್ತೂರು: ಬಸ್‌ನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವು

ಪುತ್ತೂರು: ಬಸ್‌ನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಪುತ್ತೂರು: ಬಸ್‌ನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ವ್ಯಕ್ತಿಯೊಬ್ಬರು ಚಿಣ್ಣರ ಪಾರ್ಕ್‌ ಬಳಿ ಬಸ್‌ನಿಂದ ಇಳಿದು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಂಪರ್ಕ ರಸ್ತೆಯಲ್ಲಿ ಹೋಗುತಿದ್ದ ವೇಳೆ ಕುಸಿದು ಬಿದ್ದಿದ್ದರು.ಕಾಂಗ್ರೆಸ್‌ ಮುಖಂಡ ಕಾವು ಹೇಮನಾಥ ಶೆಟ್ಟಿ ಇದನ್ನು ಗಮನಿಸಿ ಸ್ಥಳೀಯ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಈ ವೇಳೆಗಾಗಲೇ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಬಲ ಕೈಯ ತೋಳಿನಲ್ಲಿ ಪೂರ್ಣಿಮಾ ಎಸ್‌. ಎಂಬ ಅಚ್ಚು ಇದೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!