Friday, June 5, 2026
Homeಕರಾವಳಿಮಂಗಳೂರುಮಂಗಳೂರು; ಮರುವಾಯಿ ಹೆಕ್ಕಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಮಂಗಳೂರು; ಮರುವಾಯಿ ಹೆಕ್ಕಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

- Advertisement -
- Advertisement -

ಮಂಗಳೂರು; ಮರುವಾಯಿ ಹೆಕ್ಕಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಹರೇಕಳ ಬೈತಾರ್ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ. ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಮೃತ ದುರ್ದೈವಿ.
ವಿನೋದ್ ಅವರು ಇಂದು ಬೆಳಗ್ಗೆ ಮನೆಯಿಂದ ಪಂಪ್ ವೆಲ್ ಕಡೆಗೆ ಕೆಲಸಕ್ಕೆಂದು ತೆರಳಿದ್ದು ಮಧ್ಯಾಹ್ನ ವೇಳೆ ಕೆಲಸದಿಂದ ವಾಪಸ್ ಬಂದಿದ್ದಾರೆ. ಬಳಿಕ ಮನೆಯ ಬಳಿಯ ನದಿಗೆ ಮರುವಾಯಿ ಹೆಕ್ಕಲು ಇಳಿದಿದ್ದಾರೆ. ಈ ವೇಳೆ ವಿನೋದ್ ಅವರ ಕಾಲು ನದಿಯ ಕೆಸರಿನಲ್ಲಿ ಹೂತು ಹೋಗಿದ್ದು ನೀರಿನಿಂದ ಮೇಲೆಳಲು ಸಾಧ್ಯವಾಗದೆ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರು ವಿವಾಹಿತರಾಗಿದ್ದು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!