- Advertisement -
- Advertisement -
ಉಡುಪಿ : ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಬ್ರಹ್ಮಾವರ ತಾಲೂಕಿನ ಮಣೂರು ಪಡುಕರೆಯ ಜಟ್ಟಿಗೇಶ್ವರ ಸಮೀಪ ನಡೆದಿದೆ. ನಾರಾಯಣ (78) ಮೃತ ವ್ಯಕ್ತಿ.
ಬೈಕ್ ಸವಾರನೊಬ್ಬ ತೆಕ್ಕಟ್ಟೆ ಕೊಮೆಯಿಂದ ಪಡುಕರೆ ಕಡೆಗೆ ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಬೈಕ್ ಚಲಾಯಿಸಿಕೊಂಡು ಬಂದಿದ್ದಾನೆ. ಈ ವೆ ವಾಹನವು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಾರಾಯಣ ಅವರಿಗೆ ಢಿಕ್ಕಿ ಹೊಡೆದಿದೆ. ಬೈಕ್ ಢಿಕ್ಕಿಯ ರಭಸಕ್ಕೆ ನಾರಾಯಣರವರು ರಸ್ತೆಗೆ ಬಿದ್ದ ಪರಿಣಾಮ ಅವರ ತಲೆ ಹಾಗೂ ಎರಡೂ ಕಾಲಿಗೆ ಗಂಭೀರ ಗಾಯವಾಗಿತ್ತು. ತಕ್ಷಣ ಸ್ಥಳೀಯರು ಗಾಯಾಳು ನಾರಾಯಣ ರವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಕಳಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಿಸದೆ ನಾರಾಯಣ ಅವರು ಮೃತಪಟ್ಟಿರುತ್ತಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -